Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:27 - ಕನ್ನಡ ಸತ್ಯವೇದವು C.L. Bible (BSI)

27 ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತೋಟದ ಮರಗಳು ಹಣ್ಣುಬಿಡುವವು; ಹೊಲಗಳು ಒಳ್ಳೆಯ ಬೆಳೆಕೊಡುವವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಗೂಟಗಳನ್ನು ನಾನು ಮುರಿದುಹಾಕಿ ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನಿಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೆ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:27
39 ತಿಳಿವುಗಳ ಹೋಲಿಕೆ  

(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


ಪ್ರಭು ಕೊಟ್ಟೇ ತೀರುವನು ಒಳಿತನು I ನಮ್ಮ ನಾಡು ನೀಡುವುದು ಬೆಳೆಯನು II


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ಅವರು ನಡೆಸಿದ ಬಹುದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಪಾಳು ಮಾಡಿದಾಗ ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”


ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಇತ್ತನೆಮ್ಮ ದೇವನು ಆಶೀರ್ವಾದವನು I ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ನೀವು ಕ್ಷಾಮದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;


ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಹೊಲದ ಕಲ್ಲುಬಂಡೆಗಳೊಡನೆ ಒಪ್ಪಂದಮಾಡಿಕೊಳ್ಳುವೆ ಆ ಕಾಡುಪ್ರಾಣಿಗಳೊಂದಿಗೆ ನೆಮ್ಮದಿಯಿಂದ ಬಾಳುವೆ.


ಮಲಗುವಾಗ ನಿನಗೆ ಹೆದರಿಕೆಯಿರದು, ಮಲಗಿದ ಮೇಲೆ ಸುಖನಿದ್ರೆ ಬರುವುದು.


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು