Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:29 - ಕನ್ನಡ ಸತ್ಯವೇದವು C.L. Bible (BSI)

29 ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡದು, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೆಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:29
18 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


“ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು