Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:3 - ಕನ್ನಡ ಸತ್ಯವೇದವು C.L. Bible (BSI)

3 ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದೆಯುತ್ತೀರಿ, ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಕೊಬ್ಬಿದ ಕುರಿಯ ಮಾಂಸವನ್ನು ತಿನ್ನುತ್ತೀರಿ; ಅದರ ಉಣ್ಣೆಯಿಂದ ಬಟ್ಟೆಯನ್ನು ತಯಾರಿಸುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:3
18 ತಿಳಿವುಗಳ ಹೋಲಿಕೆ  

ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.


ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”


ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು.


ಯುವ ಸಿಂಹವಾಯಿತು ಆಕೆ ಬೆಳೆಸಿದಾ ಮರಿಯೊಂದು, ನರಭಕ್ಷಕ ಆಗಲಾರಂಭಿಸಿತದು ಬೇಟೆಯನು ಕಲಿತು.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!


ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು