Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:4 - ಕನ್ನಡ ಸತ್ಯವೇದವು C.L. Bible (BSI)

4 ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:4
24 ತಿಳಿವುಗಳ ಹೋಲಿಕೆ  

ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ;


ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ,


ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.


“ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ಅವರಿಂದ ಕಠಿಣವಾದ ಸೇವೆ ಮಾಡಿಸಿಕೊಳ್ಳಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯಿರಲಿ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಆಗ ಆ ಸಹೋದರನು ಹೂಂಕರಿಸಿ, “ಈ ನಾಡಿಗೆ ವ್ರಣವೈದ್ಯನಾಗಿರಲು ನನಗಿಷ್ಟವಿಲ್ಲ. ಮನೆಯಲ್ಲಿ ತಿನ್ನಲು ಅನ್ನವಿಲ್ಲ, ಉಡಲು ಬಟ್ಟೆಯಿಲ್ಲ. ನನ್ನನ್ನು ಜನನಾಯಕನನ್ನಾಗಿ ಮಾಡುವುದು ಬೇಡ,” ಎಂದು ತಿರಸ್ಕಾರದಿಂದ ಉತ್ತರಿಸುವನು.


ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು.


ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.


ಒಯ್ದವು ಅದನ್ನು ಬಾಬಿಲೋನಿನ ಅರಸನ ಬಳಿಗೆ ಬಿಗಿದು ಸರಪಣಿ, ಹಾಕಿ ಪಂಜರದೊಳಗೆ. ಅದರ ಗರ್ಜನೆ ಇಸ್ರಯೇಲಿನ ಗಿರಿಗಳಿಗೆ ಕೇಳಿಸದಂತೆ, ಸೇರಿಸಿಬಿಟ್ಟವು ಅದನ್ನು ಸುಭದ್ರ ಕೋಟೆಯೊಳಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು