Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:10 - ಕನ್ನಡ ಸತ್ಯವೇದವು C.L. Bible (BSI)

10 “ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು - ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವವು, ನಾವು ಅವುಗಳನ್ನು ಅನುಭವಿಸುವೆವು ಅಂದುಕೊಂಡು ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯ ಮಾಡಿದ್ದರಿಂದ ನನ್ನ ಜೀವದಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:10
19 ತಿಳಿವುಗಳ ಹೋಲಿಕೆ  

“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ನನ್ನ ಜನರ ಆಪತ್ಕಾಲದಲ್ಲಿ ನೀನು ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಿತ್ತು. ಅವರ ಸೊತ್ತಿಗೆ ನೀನು ಕೈಹಾಕಬಾರದಿತ್ತು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?


ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.


ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.”


ಮಾಡಿವರನು ದೇವಾ, ಗಾಳಿಗೆ ತೂರುವ ಹೊಟ್ಟಿನಂತೆ I ಸುಂಟರಗಾಳಿಯಲಿ ಮೇಲೇಳುವ ದೂಳೀಪಟದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು