Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:11 - ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನನ್ನ ಜನರನ್ನು ದ್ವೇಷಿಸಿ ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತಿಮಾಡುವೆನು; ನಿನ್ನನ್ನು ದಂಡಿಸಿದಾಗ ನಾನು ಅವರಿಗೆ ಗೋಚರನಾಗುವೆನು, ಇದು ಕರ್ತನಾದ ಯೆಹೋನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಬೇಕಾದರೆ, ನೀನು ಅವರನ್ನು ದ್ವೇಷಿಸಿದೆ. ಆದ್ದರಿಂದ, ನನ್ನ ಜೀವದಾಣೆ, ನೀನು ಹೇಗೆ ಅವರನ್ನು ನೋಯಿಸಿದೆಯೋ ಹಾಗೆಯೇ ನಾನು ನಿನ್ನನ್ನು ಶಿಕ್ಷಿಸುವೆನು. ಈ ರೀತಿಯಲ್ಲಿ, ನನ್ನ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:11
8 ತಿಳಿವುಗಳ ಹೋಲಿಕೆ  

ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”


“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು