Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಸೇಯೀರ ಬೆಟ್ಟದ ಸೀಮೆಗೆ ಅಭಿಮುಖನಾಗಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಗೆ ಅಭಿಮುಖನಾಗಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಸೇಯೀರ್ ಪರ್ವತದ ಕಡೆಗೆ ನೋಡು. ನನ್ನ ಪರವಾಗಿ ಅದಕ್ಕೆ ವಿರುದ್ಧವಾಗಿ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:2
28 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.


“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.


“ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.


“ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖವಾಗಿ ಅದನ್ನು ಕುರಿತ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ:


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,


ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.


ಈ ಅಮ್ಮೋನಿಯರನ್ನು, ಮೋವಾಬ್ಯರನ್ನು ಹಾಗೂ ಸೇಯಿರ ಪರ್ವತಪ್ರದೇಶದವರನ್ನು ನೋಡಿರಿ; ಇಸ್ರಯೇಲರು ಈಜಿಪ್ಟ್ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿಮ್ಮಿಂದ ಅಪ್ಪಣೆ ಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲವೆ?”


ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು