Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:6 - ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಹಿಂದಟ್ಟುವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವದು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿಮ್ಮನ್ನು ಮರಣವು ನುಂಗಿಬಿಡುವಂತೆ ಮಾಡುವೆನು. ಮರಣವು ನಿಮ್ಮನ್ನು ಹಿಂಬಾಲಿಸುವುದು. ನೀನು ಜನರನ್ನು ಕೊಲ್ಲಲು ಹಿಂಜರಿಯಲಿಲ್ಲ. ಆದ್ದರಿಂದ ಮರಣವು ನಿನ್ನನ್ನು ಓಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:6
12 ತಿಳಿವುಗಳ ಹೋಲಿಕೆ  

ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಅವರಲ್ಲಿ ಹತರಾದವರು ಬೀದಿಪಾಲಾಗುವರು, ಅವರ ಶವಗಳಿಂದ ದುರ್ವಾಸನೆಯು ಬಡಿಯುವುದು. ಅವರ ರಕ್ತಪ್ರವಾಹವು ಗುಡ್ಡಗಳನ್ನು ತೋಯಿಸುವುದು.


ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.


ತೋಯಿಸುವೆನು ಸಮನಾಡನು ನಿನ್ನ ರಕ್ತಪ್ರವಾಹದಿಂದ, ಹಳ್ಳಕೊಳ್ಳಗಳು ತುಂಬಿ ತುಳುಕುವುವು ಅದರಿಂದ.


ಸೆಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳು ಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು