Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:7 - ಕನ್ನಡ ಸತ್ಯವೇದವು C.L. Bible (BSI)

7 ಸೆಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳು ಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳುಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಸೇಯೀರ್ ಬೆಟ್ಟವನ್ನು ಹಾಳುಮಾಡುವೆನು. ಆ ನಗರದಿಂದ ಬರುವ ಪ್ರತಿಯೊಬ್ಬನನ್ನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆ ನಾನು ಸೇಯೀರ್ ಪರ್ವತವನ್ನು ಸಂಪೂರ್ಣ ಹಾಳುಮಾಡುವೆನು. ಅದರೊಳಗೆ ಹಾದುಹೋಗುವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:7
10 ತಿಳಿವುಗಳ ಹೋಲಿಕೆ  

ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.


ಯಾವ ವ್ಯಕ್ತಿಯೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ನಲವತ್ತು ವರ್ಷ ನಿರ್ಜನವಾಗಿರುವುದು.


ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


“ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.


ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ಏಸಾವನನ್ನು ದ್ವೇಷಿಸಿದೆ; ಅಲ್ಲದೆ ಏಸಾವನಿಗೆ ಸೇರಿದ ಮಲೆನಾಡುಗಳನ್ನು ಹಾಳುಮಾಡಿ, ಅವನ ಪಿತ್ರಾರ್ಜಿತ ರಾಜ್ಯವನ್ನು ನಾಯಿನರಿಗಳ ಬೀಡಾಗಿಸಿದೆ,” ಎಂದು ಉತ್ತರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು