ಯೆಹೆಜ್ಕೇಲನು 35:9 - ಕನ್ನಡ ಸತ್ಯವೇದವು C.L. Bible (BSI)9 ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನಿನ್ನವರಿಗೆ ನಿಶ್ಚಿತವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ನಿತ್ಯಕಾಲಕ್ಕೂ ಬರಿದಾಗಿರು. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿದುಕೊಳ್ಳುತ್ತಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |
ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”