Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:10 - ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ಹೊಲಗಳನ್ನು ಉಳುಮೆಮಾಡಿ ಬಿತ್ತುವರು; ನಿಮ್ಮಲ್ಲಿ ಬಹುಜನರು ಅಂದರೆ, ಇಸ್ರಯೇಲ್ ವಂಶವೆಲ್ಲವೂ ವಾಸಿಸುವಂತೆಮಾಡುವೆನು; ಪಟ್ಟಣಗಳು ಜನಭರಿತವಾಗುವುವು, ಹಾಳುನಿವೇಶನಗಳಲ್ಲಿ ಕಟ್ಟಡಗಳು, ಏಳುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮಲ್ಲಿ ಬಹುಜನರು ಅಂದರೆ ಇಸ್ರಾಯೇಲ್ ವಂಶವೆಲ್ಲವೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳುನಿವೇಶನಗಳಲ್ಲಿ ಕಟ್ಟಡಗಳು ಏಳುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನಲ್ಲಿ ಅನೇಕಾನೇಕ ಮಂದಿ ವಾಸಿಸುವರು. ಇಡೀ ಇಸ್ರೇಲ್ ಜನಾಂಗದವರು ಅಲ್ಲಿ ವಾಸಮಾಡುವರು. ಪಟ್ಟಣಗಳು ಜನಭರಿತವಾಗುವವು. ಹಾಳಾದ ಸ್ಥಳಗಳೆಲ್ಲಾ ತಿರುಗಿ ಕಟ್ಟಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:10
21 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ಮರಳಿ ಕಟ್ಟುವರಿವರು ಪಾಳುಬಿದ್ದ ಪುರಾತನ ಮನೆಗಳನು ಮತ್ತೆ ಎಬ್ಬಿಸುವರು ಬಿದ್ದ ಹಳೆಯ ಕಟ್ಟಡಗಳನು ನೂತನಗೊಳಿಸುವರು ತಲಾಂತರದ ಹಾಳುಬೀಳು ಪಟ್ಟಣಗಳನು.


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.


ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು