Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:25 - ಕನ್ನಡ ಸತ್ಯವೇದವು C.L. Bible (BSI)

25 ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:25
38 ತಿಳಿವುಗಳ ಹೋಲಿಕೆ  

ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಅವರು ನನಗೆ ವಿರುದ್ಧವಾಗಿ ಮಾಡಿದ ಅಧರ್ಮವನ್ನೆಲ್ಲ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ನನಗೆ ವಿರುದ್ಧ ಮಾಡಿರುವ ಪಾಪದ್ರೋಹಗಳನ್ನೆಸಗಿ ಕಟ್ಟಿಕೊಂಡಿರುವ ಅಪರಾಧಗಳನ್ನೆಲ್ಲ ಕ್ಷಮಿಸುವೆನು.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.


ಏಕೆಂದರೆ ನೀವು ಪರಿಶುದ್ಧರಾಗುವಂತೆ ಈ ದಿನ ನಿಮ್ಮ ಪರವಾಗಿ ಪ್ರಾಯಶ್ಚಿತ್ತ ಮಾಡಲಾಗುವುದು. ಸರ್ವೇಶ್ವರನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವುವು.


ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II


“ಆಗ ನಾನು ನೀರಿನಲ್ಲಿ ನಿನಗೆ ಸ್ನಾನ ಮಾಡಿಸಿ, ನಿನ್ನ ಮೇಲಿನ ರಕ್ತವನ್ನು ತೊಳೆದುಬಿಟ್ಟು, ನಿನಗೆ ತೈಲವನ್ನು ಹಚ್ಚಿದೆ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು