Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:26 - ಕನ್ನಡ ಸತ್ಯವೇದವು C.L. Bible (BSI)

26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಬದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:26
20 ತಿಳಿವುಗಳ ಹೋಲಿಕೆ  

ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.


ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲು ನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಚೈತನ್ಯವನ್ನು ಕೊಟ್ಟರು. ಅದೇ ದಿನದಲ್ಲಿ ಆ ಎಲ್ಲ ಘಟನೆಗಳು ಸಂಭವಿಸಿದವು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು