Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:28 - ಕನ್ನಡ ಸತ್ಯವೇದವು C.L. Bible (BSI)

28 ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ನಾನು ನಿಮ್ಮ ಪೂರ್ವಿಕರಿಗೆ ಕೊಟ್ಟ ದೇಶದಲ್ಲಿ ನೀವು ಬಾಳುವಿರಿ. ನೀನು ನನ್ನ ಜನರಾಗುವಿರಿ. ನಾನು ನಿಮ್ಮ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:28
25 ತಿಳಿವುಗಳ ಹೋಲಿಕೆ  

ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ :


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ನಿಮ್ಮ ಹೊಲಗಳನ್ನು ಉಳುಮೆಮಾಡಿ ಬಿತ್ತುವರು; ನಿಮ್ಮಲ್ಲಿ ಬಹುಜನರು ಅಂದರೆ, ಇಸ್ರಯೇಲ್ ವಂಶವೆಲ್ಲವೂ ವಾಸಿಸುವಂತೆಮಾಡುವೆನು; ಪಟ್ಟಣಗಳು ಜನಭರಿತವಾಗುವುವು, ಹಾಳುನಿವೇಶನಗಳಲ್ಲಿ ಕಟ್ಟಡಗಳು, ಏಳುವುವು;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ಆಗ ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನಾನು ತಮ್ಮೊಂದಿಗಿದ್ದೇನೆಂದೂ ಇಸ್ರಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂದೂ ನಿಶ್ಚಯಿಸಿಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು