Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದೀರಲ್ಲಾ! ಹರಟೆಗಾರರ ಬಾಯಿಗೆ ಬಿದ್ದು ಜನರ ದೂಷಣೆಗೆ ಗುರಿಯಾಗಿದ್ದೀರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆದ್ದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನ್ನ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನ್ನ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಬೇರೆಯವರ ವಶವಾಗಬೇಕೆಂಬದಾಗಿ ಹೀಗೆ ಮಾಡಿದರು. ಜನರು ನಿನ್ನ ವಿಷಯವಾಗಿ ಗುಜುಗುಜು ಮಾತನಾಡಿದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:3
33 ತಿಳಿವುಗಳ ಹೋಲಿಕೆ  

ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು!


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


“ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ;


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II


ದೇವಾ ಆಲಿಸೆನ್ನ ಮೊರೆಯನು I ಕಿವಿಗೊಟ್ಟು ಕೇಳೆನ್ನ ಜಪವನು II


ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.


ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ನನ್ನ ಹಾನಿಗಾಗಿ ನಿತ್ಯವೂ ಮಾಡುತ್ತಿರುವ ನಿಂದೆ ಅವಮಾನ, ತಂತ್ರೋಪಾಯ.


ಆಗ ಜನ ತುಂಬಿದ ಊರುಗಳು ಹಾಳಾಗಿ ನಾಡು ಪಾಳುಬೀಳುವುದು; ನಾನೇ ಸರ್ವೇಶ್ವರ ಎಂದು ನಿಮಗೆ ಆಗ ಗೊತ್ತಾಗುವುದು.”


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ನನ್ನ ಜನರ ಆಪತ್ಕಾಲದಲ್ಲಿ ನೀನು ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಿತ್ತು. ಅವರ ಸೊತ್ತಿಗೆ ನೀನು ಕೈಹಾಕಬಾರದಿತ್ತು.


ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು