Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:35 - ಕನ್ನಡ ಸತ್ಯವೇದವು C.L. Bible (BSI)

35 ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:35
15 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.


ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.


ನಾನದನು ಅಷ್ಟೊಂದು ಸುಂದರಗೊಳಿಸಿದ್ದೆ ಶಾಖೋಪಶಾಖೆಗಳಿಂದ ಅಸೂಯೆಪಡುತ್ತಿದ್ದವು ಏದೇನಿನ ದೇವೋದ್ಯಾನದ ವೃಕ್ಷಗಳೆಲ್ಲ.


ಹೌದು, ಹೋಗುವವರೆಲ್ಲರ ಕಣ್ಣೆದುರಿಗೆ ಬೀಡುಬಿದ್ದು ಕಾಡಾದ ಭೂಮಿಯನ್ನು ಕೃಷಿಮಾಡುವರು.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು