Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:36 - ಕನ್ನಡ ಸತ್ಯವೇದವು C.L. Bible (BSI)

36 ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋವನಾದ ನಾನೇ ಬಿದ್ದುಹೋದದನ್ನು ಕಟ್ಟಿ ಹಾಳಾದದನ್ನು ಬೆಳೆಯಿಸಿದ್ದೇನೆಂಬದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವದು; ಯೆಹೋವನಾದ ನಾನೇ ನುಡಿದಿದ್ದೇನೆ, ನಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋವ ದೇವರಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ ಮತ್ತು ನಾನೇ ಇದನ್ನು ಮಾಡುತ್ತೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:36
15 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”


ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.


ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಆಗ ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನಾನು ತಮ್ಮೊಂದಿಗಿದ್ದೇನೆಂದೂ ಇಸ್ರಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂದೂ ನಿಶ್ಚಯಿಸಿಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು