ಯೆಹೆಜ್ಕೇಲನು 36:37 - ಕನ್ನಡ ಸತ್ಯವೇದವು C.L. Bible (BSI)37 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿ |