Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:4 - ಕನ್ನಡ ಸತ್ಯವೇದವು C.L. Bible (BSI)

4 ಆದಕಾರಣ ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನಾದ ದೇವರ ಈ ವಾಕ್ಯವನ್ನು ಕೇಳಿರಿ - ಬೆಟ್ಟಗುಡ್ಡಗಳಿಗೆ ತೊರೆತಗ್ಗುಗಳಿಗೆ, ಕಾಡಾದ ಹಾಳು ಪ್ರದೇಶಗಳಿಗೆ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೆ ಸರ್ವೇಶ್ವರನಾದ ದೇವರು ಹೀಗೆ ನುಡಿಯುತ್ತಾರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯಗಳನ್ನು ಕೇಳಿರಿ - ಬೆಟ್ಟಗುಡ್ಡ ತೊರೆತಗ್ಗುಗಳಿಗೂ ಕಾಡಾದ ಹಾಳುಪ್ರದೇಶಗಳಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ ಯೆಹೋವಕರ್ತನು ಹೀಗೆ ನುಡಿಯುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನ್ನ ಒಡೆಯನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆಗಳಿಗೂ ಕಣಿವೆಗಳಿಗೂ ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳೆಹೊಡೆಯಲ್ಪಟ್ಟು ಅಪಹ್ಯಾಸಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಹೀಗೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಪರ್ವತಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:4
15 ತಿಳಿವುಗಳ ಹೋಲಿಕೆ  

ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡೋ ಹಳ್ಳದಿಣ್ಣೆಗಳ ನಾಡು; ಆಕಾಶದಿಂದ ಮಳೆಬಿದ್ದಂತೆ ನೀರುದೊರಕುತ್ತದೆ.


“ಹೀಗಿರಲು ಇಸ್ರಯೇಲ್ ನಾಡಿನ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ, ತೊರೆ-ತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ಕೋಪೋದ್ರೇಕದಿಂದ ರೋಷಾವೇಷದಿಂದ ಮಾತನಾಡಿದ್ದೇನೆ. ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ.


“ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:


ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು