Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:6 - ಕನ್ನಡ ಸತ್ಯವೇದವು C.L. Bible (BSI)

6 “ಹೀಗಿರಲು ಇಸ್ರಯೇಲ್ ನಾಡಿನ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ, ತೊರೆ-ತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ಕೋಪೋದ್ರೇಕದಿಂದ ರೋಷಾವೇಷದಿಂದ ಮಾತನಾಡಿದ್ದೇನೆ. ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ಮಾತಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಇಸ್ರೇಲ್ ದೇಶದ ವಿಷಯವಾಗಿ ಅವರಿಗೆ ಹೇಳು. ಪರ್ವತ, ಬೆಟ್ಟ, ತಗ್ಗು, ಹೊಳೆಗಳಿಗೆ ಹೇಳು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ತಿಳಿಸು. ‘ನೀನು ಆ ದೇಶಗಳವರ ನಿಂದನೆಯ ಮಾತುಗಳನ್ನು ಕೇಳಬೇಕಾಯಿತಲ್ಲಾ ಎಂದು ನನ್ನ ಹೃದಯವು ಸಿಟ್ಟಿನಲ್ಲಿ ಕುದಿಯುತ್ತದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು. ಪರ್ವತಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ: ಇತರ ಜನಾಂಗಗಳ ಅವಮಾನವನ್ನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರದಿಂದಲೂ ಮಾತನಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:6
11 ತಿಳಿವುಗಳ ಹೋಲಿಕೆ  

ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು II


ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


ನಾನು ರೋಷಾನಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ: ಆಹಾ, ಆ ದಿನದಲ್ಲಿ, ಇಸ್ರಯೇಲ್ ನಾಡಿನೊಳಗೆ ಅದ್ಭುತಕಂಪನವಾಗುವುದು ಖಂಡಿತ;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗೋಗನು ಇಸ್ರಯೇಲ್ ನಾಡಿನ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು