Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:7 - ಕನ್ನಡ ಸತ್ಯವೇದವು C.L. Bible (BSI)

7 ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಸುತ್ತಲೂ ಇರುವ ದೇಶಗಳು ನಿನ್ನ ವಿರುದ್ಧವಾಗಿ ಅವಮಾನಕರವಾದ ಮಾತುಗಳನ್ನು ಆಡಿದ್ದರಿಂದ ಅವುಗಳನ್ನು ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನ್ನ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನನ್ನ ಕೈಯೆತ್ತಿ ಪ್ರಮಾಣ ಮಾಡಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿರುವ ಆ ಜನಾಂಗಗಳು ತಮ್ಮ ನಿಂದೆಯನ್ನು ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:7
14 ತಿಳಿವುಗಳ ಹೋಲಿಕೆ  

ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


“ಹೀಗಿರಲು ಇಸ್ರಯೇಲ್ ನಾಡಿನ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ, ತೊರೆ-ತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ಕೋಪೋದ್ರೇಕದಿಂದ ರೋಷಾವೇಷದಿಂದ ಮಾತನಾಡಿದ್ದೇನೆ. ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ.


ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು