Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:13 - ಕನ್ನಡ ಸತ್ಯವೇದವು C.L. Bible (BSI)

13 ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಜನರೇ, ನಿಮ್ಮನ್ನು ಸಮಾಧಿಯೊಳಗಿಂದ ಎಬ್ಬಿಸಿ ತರುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:13
7 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”


ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು