Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:25 - ಕನ್ನಡ ಸತ್ಯವೇದವು C.L. Bible (BSI)

25 ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:25
33 ತಿಳಿವುಗಳ ಹೋಲಿಕೆ  

ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು.


ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.


ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.


‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು