Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:3
14 ತಿಳಿವುಗಳ ಹೋಲಿಕೆ  

ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.


ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.


ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.


ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು