Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:10 - ಕನ್ನಡ ಸತ್ಯವೇದವು C.L. Bible (BSI)

10 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ಆ ಸಮಯದಲ್ಲಿ ನಿನ್ನ ಮನಸ್ಸಿಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನ್ನು ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:10
16 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.


ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು