ಯೆಹೆಜ್ಕೇಲನು 38:11 - ಕನ್ನಡ ಸತ್ಯವೇದವು C.L. Bible (BSI)11 ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು - ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು ಅಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನ್ನು ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನ್ನು ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಬ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಬಾಗಿಲು ಸಹ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ. ಅಧ್ಯಾಯವನ್ನು ನೋಡಿ |