ಯೆಹೆಜ್ಕೇಲನು 38:16 - ಕನ್ನಡ ಸತ್ಯವೇದವು C.L. Bible (BSI)16 ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು. ಅಧ್ಯಾಯವನ್ನು ನೋಡಿ |