Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:23 - ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡು ಬಹುಜನಾಂಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:23
17 ತಿಳಿವುಗಳ ಹೋಲಿಕೆ  

ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”


ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲ ದ್ರೋಹಿಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು.


ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ನಾಡನ್ನು ಕೊಟ್ಟೆನೋ ಆ ಇಸ್ರಾಯೇಲ್ ನಾಡಿಗೆ ನಿಮ್ಮನ್ನು ಬರಮಾಡುವಾಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”


“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಹೊಗಳುವುವು ನಿನ್ನನ್ನು ಬಲಿಷ್ಟ ರಾಷ್ಟ್ರಗಳು, ನಿನಗಂಜುವುವು ಕ್ರೂರಿಗಳ ಪಟ್ಟಣಗಳು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು