Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:4 - ಕನ್ನಡ ಸತ್ಯವೇದವು C.L. Bible (BSI)

4 ಇಗೋ, ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ, ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆಯುವೆನು. ಅಶ್ವಾರೂಢರು, ಖೇಡ್ಯಪ್ರಾಣಿಗಳು, ಎಲ್ಲ ವಿಚಿತ್ರಾಂಬರು ಹಾಗು ಖಡ್ಗಹಸ್ತರು ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆದು ಅಶ್ವಾರೂಢರೂ ಖೇಡ್ಯಪಾಣಿಗಳೂ ಯಾರೂ ತಪ್ಪದೆ ವಿಚಿತ್ರಾಂಬರರೂ ಖಡ್ಗಹಸ್ತರೂ ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿನ್ನ ದವಡೆಗೆ ಕೊಕ್ಕೆ ಹಾಕಿ ನಿನ್ನನ್ನು ಸೆರೆಹಿಡಿದುಕೊಂಡು ಬರುವೆನು. ನಿನ್ನೆಲ್ಲಾ ಭೂಸೈನಿಕರನ್ನೂ ನಿನ್ನೆಲ್ಲಾ ಕುದುರೆಗಳನ್ನೂ ನಿನ್ನೆಲ್ಲಾ ರಾಹುತರನ್ನೂ ಬಂಧಿಸಿ ತರುವೆನು. ನಿನ್ನ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನ್ನು ತೊಟ್ಟುಕೊಂಡಿರುವಾಗಲೇ ಅವರನ್ನು ಬಂಧಿಸಿ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:4
14 ತಿಳಿವುಗಳ ಹೋಲಿಕೆ  

“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ನಾನು ನಿನ್ನ ದವಡೆಗಳಿಗೆ ಗಾಳಹಾಕುವೆನು; ನಿನ್ನ ನದಿಯ ಮೀನುಗಳು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯೆಯಿಂದ ಈಚೆಗೆ ಎಳೆಯುವೆನು.


ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹುಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವೆ.


ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”


ಇಗೋ, ನಾನು ನಿನಗೆ ವಿರುದ್ಧನಾಗಿ, ನಿನ್ನನ್ನು ತಿರುಗಿಸಿ ಮುನ್ನಡೆಸಿ, ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,


ಅಶ್ವಗಳೇ, ಕುಣಿದಾಡಿ; ರಥಗಳೇ, ರಭಸವಾಗಿ ಓಡಿ! ಹೊರಡಲಿ ಶೂರರು, ಖೇಡ್ಯ ಸನ್ನದ್ಧರಾದ ಸುಡಾನರು, ಲಿಬಿಯಾದವರು ಮುನ್ನುಗ್ಗಲಿ ಧನುರ್ಧಾರಿಗಳಾದ ಲಿಡಿಯದವರು.


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ಆಮೇಲೆ ಅಮಚ್ಯನು ಯೆಹೂದ್ಯರನ್ನು ಸಹಸ್ರಾಧಿಪತಿ ಹಾಗು ಶತಾಧಿಪತಿಗಳ ಕೈಕೆಳಗೆ ಒಟ್ಟುಗೂಡಿಸಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರನ್ನು ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರನ್ನು ಲೆಕ್ಕಮಾಡಿಸಿದನು. ಅವರಲ್ಲಿ ಬರ್ಜಿ, ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷಮಂದಿ ಸಿಕ್ಕಿದರು.


ದಾವೀದನು ಮರುಭೂಮಿಯ ಕೋಟೆಯಲ್ಲಿದ್ದಾಗ ಅವನ ಪಡೆಗಳಲ್ಲಿ ಬಂದು ಸೇರಿದ ಗಾದ್ ಗೋತ್ರದ ಪ್ರಸಿದ್ಧರೂ ಅನುಭವಶಾಲಿಗಳೂ ಆದ ಯುದ್ಧವೀರರ ಹೆಸರುಗಳು: ಇವರು ನೋಡಲು ಸಿಂಹಗಳಂತೆ ಭೀಕರರೂ ಪರ್ವತದ ಜಿಂಕೆಗಳಂತೆ ಚುರುಕಾದವರೂ ಗುರಾಣಿ, ಈಟಿಗಳನ್ನು ಉಪಯೋಗಿಸುವುದರಲ್ಲಿ ನಿಪುಣರೂ ಆಗಿದ್ದರು.


ಇವಳು ನಾಯಕ-ಉಪನಾಯಕರೂ ಯೋಧರೂ ವಿಚಿತ್ರ ವಸ್ತ್ರಧಾರಿಗಳೂ ಅಶ್ವಾರೂಢರೂ ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿದಳು.


ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ರಾಜನಾದ ಗೋಗನೇ,


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು