Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:8 - ಕನ್ನಡ ಸತ್ಯವೇದವು C.L. Bible (BSI)

8 ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:8
32 ತಿಳಿವುಗಳ ಹೋಲಿಕೆ  

ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.


ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲ ಸ್ಥಳಗಳಿಂದ ಬಿಡಿಸಿ, ಜನಾಂಗಗಳ ವಶದಿಂದ ತಪ್ಪಿಸಿ, ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ ಇಸ್ರಯೇಲಿನ ಬೆಟ್ಟಗಳಲ್ಲೂ, ತೊರೆಗಳ ಬಳಿಯಲ್ಲೂ ನಾಡಿನ ಎಲ್ಲ ಹಕ್ಕೆಗಳಲ್ಲೂ ಮೇಯಿಸುವೆನು;


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು.


ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.


ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ.


ಆಗಲಿ, ನಾನು ನನ್ನ ಸ್ವಜನರ ಬಳಿಗೆ ತೆರಳುತ್ತೇನೆ. ಆದರೆ ಈ ಜನರು ನಿನ್ನ ಜನರಿಗೆ ಕೊನೆಗೆ ಏನು ಮಾಡುವರೋ ಅದನ್ನು ತಿಳಿಸುತ್ತೇನೆ ಕೇಳು,” ಎಂದು ಹೇಳಿ


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


“ಹೀಗಿರಲು ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನನ್ನ ಜನರಾದ ಇಸ್ರಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನನಗೆ ಗೊತ್ತಾಗುವುದಿಲ್ಲವೆ?


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು