Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:13 - ಕನ್ನಡ ಸತ್ಯವೇದವು C.L. Bible (BSI)

13 ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೌದು, ದೇಶದ ಸಕಲಪ್ರಜೆಗಳು ಅವರನ್ನು ಹೂಳಿಬಿಡುವರು; ಹೀಗೆ ನಾನು ಪ್ರಖ್ಯಾತಿಗೊಳ್ಳುವಾಗ ನನ್ನ ಜನರಿಗೆ ಹೆಸರುವಾಸಿಯಾಗುವದು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಾಮಾನ್ಯ ಜನರು ಶತ್ರು ಸೈನಿಕರನ್ನು ಹೂಣಿಡುವರು. ನಾನು ನನ್ನ ಹೆಸರನ್ನು ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:13
8 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು