Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:17 - ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ - ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಬನ್ನಿರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:17
18 ತಿಳಿವುಗಳ ಹೋಲಿಕೆ  

“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.


ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.


“ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ!


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು.


ಅವರು ಬಲಿಭೋಜನಕ್ಕಾಗಿ ಗುಡ್ಡಕ್ಕೆ ಹೋಗುವ ಮೊದಲೇ ನೀವು ಊರೊಳಕ್ಕೆ ಹೋದರೆ ಸಿಕ್ಕುವರು. ಅವರು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಅವರು ಹೋಗಿ ಬಲಿ ಆಹಾರವನ್ನು ಆಶೀರ್ವದಿಸುತ್ತಾರೆ; ಅನಂತರವೇ ಆಮಂತ್ರಿತರು ಊಟಮಾಡುವುದು. ಈಗಲೇ ಹೋಗಿ; ಅವನು ಸಿಕ್ಕುವ ಸಮಯ ಇದೇ,” ಎಂದರು ಆ ಮಹಿಳೆಯರು.


ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ಹೆಣವಿದ್ದೆಡೆ ರಣಹದ್ದುಗಳು ಬಂದು ಸೇರುತ್ತವೆ.


ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.


(ಇದಲ್ಲದೆ ಒಂದು ಪಟ್ಟಣಕ್ಕೆ ‘ಹಮೋನ್’ ಪುರವೆಂದು ಹೆಸರಾಗುವುದು.) ಹೀಗೆ ದೇಶವನ್ನು ಶುದ್ಧಿಮಾಡುವರು.”


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು