Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:23 - ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ, ಇಸ್ರಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿಹೋದರೆಂದು ಮತ್ತು ಅವರು ನನಗೆ ದ್ರೋಹ ಮಾಡಿದ್ದರಿಂದಲೆ ನಾನು ಅವರಿಗೆ ವಿಮುಖನಾಗಿ ಅವರೆಲ್ಲರು ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂದು ಜನಾಂಗಗಳಿಗೆ ಗೊತ್ತಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಇಸ್ರಾಯೇಲ್ಯರು ತಮ್ಮ ಅಧರ್ಮದ ನಿವಿುತ್ತವೇ ಸೆರೆಯಾಗಿ ಹೋದರೆಂತಲೂ ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನ್ನ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನ್ನು ಸೋಲಿಸುವಂತೆ ಮಾಡಿದೆನು. ಆದ್ದರಿಂದ ಅವರು ರಣರಂಗದಲ್ಲಿ ಮಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:23
27 ತಿಳಿವುಗಳ ಹೋಲಿಕೆ  

ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಎಂತಲೆ ಒಪ್ಪಿಸಿದನವರನು ಅನ್ಯರಾಷ್ಟ್ರಗಳ ಕೈಗೆ I ಹಗೆಮಾಡುತ್ತಿದ್ದವರೇ ಅಧಿಕಾರಿಗಳಾದರವರಿಗೆ II


ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು.


“ಹೀಗಿರಲು, ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳು ಪುನಃ ದ್ರೋಹಮಾಡಿ ನನ್ನನ್ನು ದೂಷಿಸಿದ್ದಾರೆ.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು