Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:24 - ಕನ್ನಡ ಸತ್ಯವೇದವು C.L. Bible (BSI)

24 ಅವರ ಅಶುದ್ಧತನಕ್ಕೂ ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ಅವರಿಗೆ ವಿಮುಖನಾದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರ ಹೊಲಸುತನಕ್ಕೂ ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ಅವರಿಗೆ ವಿಮುಖನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ಪಾಪ ಮಾಡಿ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಂಡರು. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆನು. ಅವರಿಂದ ನಾನು ದೂರವಾಗಿ ಅವರಿಗೆ ಸಹಾಯ ಮಾಡಲು ನಿರಾಕರಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರ ಅಶುದ್ಧತ್ವದ ಪ್ರಕಾರವೂ ಅವರ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:24
14 ತಿಳಿವುಗಳ ಹೋಲಿಕೆ  

ಜನಾಂಗಗಳೊಳಗೆ ಅವರನ್ನು ಚದರಿಸುವೆನು; ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.


ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ !


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.


ನಿಮ್ಮ ಅಪರಾಧಗಳು ಈ ಪ್ರಯೋಜನಗಳನ್ನು ತಡೆಗಟ್ಟಿವೆ. ನಿಮ್ಮ ಪಾಪಗಳು, ಈ ಒಳಿತು ನಿಮಗೆ ಸಿಗದಂತೆ ತಪ್ಪಿಸಿವೆ.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು