Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:26 - ಕನ್ನಡ ಸತ್ಯವೇದವು C.L. Bible (BSI)

26 ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಂಡ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಜನರು ತಮಗೊದಗಿದ ಅವಮಾನವನ್ನೂ ನನಗೆ ವಿರುದ್ಧವಾಗಿ ವರ್ತಿಸಿದ್ದನ್ನೂ ಮರೆತುಬಿಡುವರು. ತಮ್ಮ ಸ್ವದೇಶದಲ್ಲಿ ಸುರಕ್ಷಿತವಾಗಿ ವಾಸಿಸುವರು. ಅವರು ಯಾರಿಗೂ ಹೆದರಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:26
23 ತಿಳಿವುಗಳ ಹೋಲಿಕೆ  

ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


“ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ಏಲಾಮು ಮಲಗುವುದಕ್ಕೆ, ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತಮುತ್ತಲಿವೆ. ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳ ಏರ್ಪಾಡಾಗಿದೆ.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು.


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


“ಹೀಗಿರಲು, ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳು ಪುನಃ ದ್ರೋಹಮಾಡಿ ನನ್ನನ್ನು ದೂಷಿಸಿದ್ದಾರೆ.


ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ನನಗೆ ಯಾಜಕ ಸೇವೆಮಾಡುವುದಕ್ಕೆ ಅವರು ನನ್ನ ಸನ್ನಿಧಿಗೆ ಬರಕೂಡದು. ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು. ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.


ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು