Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:28 - ಕನ್ನಡ ಸತ್ಯವೇದವು C.L. Bible (BSI)

28 ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ ಆಮೇಲೆ ಒಟ್ಟುಗೂಡಿಸಿ ಸ್ವದೇಶಕ್ಕೆ ತಂದದರಿಂದ ನಾನೇ ತಮ್ಮ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:28
14 ತಿಳಿವುಗಳ ಹೋಲಿಕೆ  

ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಆಗ ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನಾನು ತಮ್ಮೊಂದಿಗಿದ್ದೇನೆಂದೂ ಇಸ್ರಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂದೂ ನಿಶ್ಚಯಿಸಿಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲ ದ್ರೋಹಿಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು