Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:29 - ಕನ್ನಡ ಸತ್ಯವೇದವು C.L. Bible (BSI)

29 ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:29
20 ತಿಳಿವುಗಳ ಹೋಲಿಕೆ  

“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸುವೆನು. ಆಗ ನನ್ನ ರೋಷವು ನಿನ್ನಿಂದ ದೂರವಾಗುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು