Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:4 - ಕನ್ನಡ ಸತ್ಯವೇದವು C.L. Bible (BSI)

4 ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಜನಾಂಗಗಳೂ ಇಸ್ರಾಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸತಿನ್ನುವ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:4
14 ತಿಳಿವುಗಳ ಹೋಲಿಕೆ  

“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ನಾನೇ ಅಪ್ಪಣೆಕೊಟ್ಟಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.


ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು