Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:5 - ಕನ್ನಡ ಸತ್ಯವೇದವು C.L. Bible (BSI)

5 ನಾನೇ ಅಪ್ಪಣೆಕೊಟ್ಟಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಬೈಲಿನಲ್ಲಿ ಬೀಳುವಿರಿ; ನಾನೇ ಅಪ್ಪಣೆಕೊಟ್ಟಿದ್ದೇನಲ್ಲಾ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ನಗರವನ್ನು ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವೆ. ಇದನ್ನು ನಾನು ನುಡಿದಿದ್ದೇನೆ.’” ಈ ಸಂಗತಿಗಳನ್ನು ನನ್ನ ಒಡೆಯನಾದ ಯೆಹೋವನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:5
8 ತಿಳಿವುಗಳ ಹೋಲಿಕೆ  

ಆಕಾಶದ ಪಕ್ಷಿಗಳು ನಿನ್ನ ಮೇಲೆರಗುವಂತೆ, ಸಮಸ್ತ ಭೂಜಂತುಗಳು ನಿನ್ನಿಂದ ತೃಪ್ತಿಗೊಳ್ಳುವಂತೆ, ನಿನ್ನನೆಸೆದುಬಿಡುವೆ ನೆಲದ ಮೇಲೆ ಬಯಲಿಗೆ.


ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.


ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು