Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಾಯೇಲ್ಯರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲೀಸೆನು; ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾವಿು ಎಂದು ಜನಾಂಗಗಳಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:7
23 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”


ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ನನ್ನ ಅಂತರಂಗವೇ, ಭಜಿಸು ಆತನನು I ನೆನೆ ಆತನ ಪರಮಪಾವನ ನಾಮವನು II


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ ಬಂದಿತು, ಸಂಭವಿಸಿತು; ನಾನು ಮುಂತಿಳಿಸಿದ ದಿನ ಇದೇ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು