ಯೆಹೆಜ್ಕೇಲನು 4:6 - ಕನ್ನಡ ಸತ್ಯವೇದವು C.L. Bible (BSI)6 ಅಷ್ಟು ದಿವಸಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು. ವರ್ಷ ಒಂದಕ್ಕೆ ಒಂದು ದಿವಸ ಮೇರೆಗೆ ನಲವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಷ್ಟು ದಿವಸಗಳನ್ನು ತೀರಿಸಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು; ವರುಷ ಒಂದಕ್ಕೆ ಒಂದು ದಿನದ ಮೇರೆಗೆ ನಾಲ್ವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಅನಂತರ ನೀನು ನಿನ್ನ ಬಲಗಡೆಯಲ್ಲಿ ನಲವತ್ತು ದಿವಸಗಳ ಕಾಲ ಮಲಗಬೇಕು. ಈ ಸಾರಿ ನೀನು ಯೆಹೂದದ ದೋಷಗಳನ್ನು ನಲವತ್ತು ದಿವಸ ಹೊತ್ತುಕೊಳ್ಳುವೆ. ಒಂದು ದಿವಸವು ಒಂದು ವರ್ಷಕ್ಕೆ ಸಮಾನ. ಯೆಹೂದವು ಎಷ್ಟು ಕಾಲ ಶಿಕ್ಷೆಯನ್ನು ಅನುಭವಿಸಬೇಕೆಂದು ಇದು ತೋರಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಗಡೆಯಲ್ಲಿ ಮಲಗಿ, ಯೆಹೂದ ಜನರ ಅಕ್ರಮವನ್ನು ನಲವತ್ತು ದಿವಸ ಹೊರಬೇಕು. ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |