Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:9 - ಕನ್ನಡ ಸತ್ಯವೇದವು C.L. Bible (BSI)

9 “ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರ ತೊಂಬತ್ತು ದಿನ ಅದನ್ನು ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಬತ್ತು ದಿನ ಅದನ್ನು ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಭತ್ತು ದಿನ ಅದನ್ನು ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಮತ್ತೆ ಹೇಳಿದ್ದೇನೆಂದರೆ: “ನೀನು ರೊಟ್ಟಿಯನ್ನು ಮಾಡಲು ಕಾಳುಗಳನ್ನು ತರಬೇಕು. ಸ್ವಲ್ಪ ಗೋಧಿ, ಬಾರ್ಲಿ, ಅಲಸಂದೆ, ಸಾವೆ, ಕಡಲೆ ಇವುಗಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಹಾಕಿ ಬೀಸಿ ಹಿಟ್ಟು ಮಾಡು. ಈ ಹಿಟ್ಟನ್ನು ನಾದಿ ರೊಟ್ಟಿ ಮಾಡು. ನೀನು ಮುನ್ನೂರತೊಂಭತ್ತು ದಿವಸಗಳ ಕಾಲ ನಿನ್ನ ಎಡಮಗ್ಗುಲಲ್ಲಿ ಮಲಗಿರುವಾಗ ಅದನ್ನು ಮಾತ್ರ ತಿನ್ನುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀನು ಗೋಧಿ, ಜವೆಗೋಧಿ, ಅವರೆ, ಅಲಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು, ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು, ನೀನು ಒಂದು ಕಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು, ಮುನ್ನೂರ ತೊಂಬತ್ತು ದಿನಗಳು ಅವರಿಂದಲೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:9
5 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;


“ಹಾಗೆಯೇ ಇಸ್ರಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಸರ್ವೇಶ್ವರನಾದ ನನ್ನ ನುಡಿ.”


ಒಮ್ಮೆ ಭೂಮಿಯನ್ನು ಹಸನುಮಾಡಿದ ಮೇಲೆ ಜೀರಿಗೆಯನ್ನು ಚೆಲ್ಲಿ, ಸದಾಪನ್ನು ಬಿತ್ತುವವನಲ್ಲವೆ? ಗೋದಿಯನ್ನು ಸಾಲುಸಾಲಾಗಿಯೂ ಬಾರ್ಲಿಯನ್ನು ತಕ್ಕ ಸ್ಥಳದಲ್ಲಿ ಬಿತ್ತಿ, ಕಡಲೆಯನ್ನು ಅಂಚಿನಲ್ಲಿ ಹಾಕುವವನಲ್ಲವೆ?


ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!


ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು