Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:1 - ಕನ್ನಡ ಸತ್ಯವೇದವು C.L. Bible (BSI)

1 ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಸೆರೆಯಾದ ಇಪ್ಪತ್ತೈದನೆಯ ವರುಷದ ಅಂದರೆ ಪಟ್ಟಣವು ಹಾಳಾದ ಹದಿನಾಲ್ಕನೆಯ ವರುಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ, ಹೌದು, ಆ ದಿನದಲ್ಲೇ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನ್ನನ್ನು ಅಲ್ಲಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:1
17 ತಿಳಿವುಗಳ ಹೋಲಿಕೆ  

ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.


ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.


ಹನ್ನೆರಡನೆಯ ವರ್ಷದ ಹದಿನೈದನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು -


ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು.


“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು