ಯೆಹೆಜ್ಕೇಲನು 40:16 - ಕನ್ನಡ ಸತ್ಯವೇದವು C.L. Bible (BSI)16 ಗೋಡೇಕೋಣೆಗಳಲ್ಲೂ ಒಳಗಣ ಎರಡು ಕಡೆಯ ನಿಲುವುಕಂಬಗಳಲ್ಲೂ ಕೈಸಾಲೆಗಳಲ್ಲೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತಮುತ್ತಲು ಇದ್ದವು; ಹೊರಗಣ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಗೋಡೇಕೋಣೆಗಳಲ್ಲಿಯೂ ಒಳಗಣ ಎರಡು ಕಡೆಯ ನಿಲವು ಕಂಬಗಳಲ್ಲಿಯೂ ಕೈಸಾಲೆಯಲ್ಲಿಯೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತುಮುತ್ತಲಿದ್ದವು; [ಹೊರಗಣ] ನಿಲವುಕಂಬಗಳಲ್ಲಿ ಖರ್ಜೂರವೃಕ್ಷಗಳು ಚಿತ್ರಿತವಾಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕೋಣೆಯ ಉಪವಿಭಾಗಗಳು ಮತ್ತು ಬಾಗಿಲ ಚೌಕಟ್ಟಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು. ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು. ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. ಅಧ್ಯಾಯವನ್ನು ನೋಡಿ |