Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:22 - ಕನ್ನಡ ಸತ್ಯವೇದವು C.L. Bible (BSI)

22 ಅಲ್ಲಿನ ಕಿಟಕಿಗಳೂ ಕೈಸಾಲೆಯೂ ಚಿತ್ರಿತವಾಗಿದ್ದ ಖರ್ಜೂರ ವೃಕ್ಷಗಳೂ ಮೂಡಣ ಹೆಬ್ಬಾಗಿಲುಗಳ ಅಳತೆಯಷ್ಟಿದ್ದವು; ಏಳು ಮೆಟ್ಟಲು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಕೈಸಾಲೆ ಒಳಗಡೆಯಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಲ್ಲಿನ ಕಿಟಕಿಗಳೂ ಕೈಸಾಲೆಯೂ [ಚಿತ್ರಿತವಾಗಿದ್ದ] ಖರ್ಜೂರ ವೃಕ್ಷಗಳೂ ಮೂಡಣ ಹೆಬ್ಬಾಗಿಲಿನವುಗಳ ಅಳತೆಯಷ್ಟಿದ್ದವು; ಏಳು ಮೆಟ್ಲು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಕೈಸಾಲೆಯು ಒಳಗಡೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅದರ ಕಿಟಕಿಗಳು, ಕೈಸಾಲೆ, ಖರ್ಜೂರ ವೃಕ್ಷದ ಕೆತ್ತನೆ ಕೆಲಸಗಳೆಲ್ಲವೂ ಪೂರ್ವದ ಪ್ರವೇಶದ್ವಾರದಂತೆಯೇ ಇದ್ದವು. ಹೊರಗಿನಿಂದ ಪ್ರವೇಶ ದ್ವಾರಕ್ಕೆ ಬರಲು ಏಳು ಮೆಟ್ಟಿಲುಗಳಿದ್ದವು. ಅದರ ಕೈಸಾಲೆಯು ಪ್ರವೇಶದ್ವಾರದ ಒಳಭಾಗದ ಕೊನೆಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದರ ಕಿಟಕಿಗಳೂ ಅದರ ಕೈಸಾಲೆಗಳೂ ಅದರ ಖರ್ಜೂರದ ಗಿಡಗಳೂ ಪೂರ್ವ ಕಡೆಯ ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:22
17 ತಿಳಿವುಗಳ ಹೋಲಿಕೆ  

ಆದರೆ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು. ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.


ಆ ಹೆಬ್ಬಾಗಿಲ ಕೈಸಾಲೆ ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು; ಅದರ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.


ದ್ವಾರಮಂಟಪದ ಉದ್ದ ಹತ್ತು ಮೀಟರ್, ಅಗಲ ಐದುವರೆ ಮೀಟರ್ ಇದ್ದವು. ಹತ್ತು ಮೆಟ್ಟಲುಗಳನ್ನು ಹತ್ತಿ ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ನಿಲವುಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭ ಇತ್ತು.


ಗೋಡೇಕೋಣೆಗಳಲ್ಲೂ ಒಳಗಣ ಎರಡು ಕಡೆಯ ನಿಲುವುಕಂಬಗಳಲ್ಲೂ ಕೈಸಾಲೆಗಳಲ್ಲೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತಮುತ್ತಲು ಇದ್ದವು; ಹೊರಗಣ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.


ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು ಮೆಟ್ಟಲುಗಳನ್ನು ಹತ್ತಿ ಹೊಸ್ತಿಲಿನ ಅಗಲವನ್ನು ಅಳೆದನು. ಒಂದೊಂದು ಹೊಸ್ತಿಲಿನ ಅಗಲವು ಮೂರು ಮೀಟರ್ ಇತ್ತು.


ಅದರ ಕೈಸಾಲೆ ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು. ಕೈಸಾಲೆಯ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಇಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.


ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಲುಗಳಿದ್ದವು; ಕೈಸಾಲೆ ಒಳಗಡೆಯಿತ್ತು; ಕೈಸಾಲೆಯ ಎದುರು ಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದಲೂ ಆ ಹಲಗೆಗಳನ್ನು ತೋರಣ, ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕ ಬಂಗಾರದ ತಗಡಿನಿಂದಲೂ ಹೊದಿಸಿ, ಅದನ್ನು ರತ್ನಗಳಿಂದ ಅಲಂಕರಿಸಿದನು.


ಆ ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ, ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು.


ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆ ಇದ್ದಲ್ಲಿ ಆ ತಗಡನ್ನು ಬಡಿಸಿದನು.


ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ, ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.


ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿದನು.


ಅದರಲ್ಲೂ ಅದರ ಕೈಸಾಲೆಯಲ್ಲೂ ಎಲ್ಲ ಕಡೆ ಅಂಥ ಕಿಟಕಿಗಳೇ ಇದ್ದವು; ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲ ಕಡೆಯಿದ್ದವು. ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.


ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕುಕಿಂಡಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು