Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:28 - ಕನ್ನಡ ಸತ್ಯವೇದವು C.L. Bible (BSI)

28 ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲ ಮಾರ್ಗವಾಗಿ ಒಳಗಣ ಪ್ರಾಕಾರಕ್ಕೆ ಕರೆದುತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ ಅಲ್ಲಿನ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಷ್ಟೇ ಅಳತೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಅವನು ನನ್ನನ್ನು ತೆಂಕಣ ಬಾಗಿಲ ಮಾರ್ಗವಾಗಿ ಒಳಗಣ ಪ್ರಾಕಾರಕ್ಕೆ ಕರತಂದನು; ಅವನು ಆ ತೆಂಕಣ ಹೆಬ್ಬಾಗಿಲನ್ನೂ ಅಲ್ಲಿನ ಗೊಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಷ್ಟೇ ಅಳತೆಗಳಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಮೇಲೆ ಅವನು ದಕ್ಷಿಣದ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಈ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಬೇರೆ ದ್ವಾರಗಳಂತೆಯೇ ಉದ್ದಗಲವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಿಲನ್ನು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:28
5 ತಿಳಿವುಗಳ ಹೋಲಿಕೆ  

ಆಮೇಲೆ ಅವನು ನನ್ನನ್ನು ಉತ್ತರ ಬಾಗಿಲಿಗೆ ಕರೆದುತಂದು ಅದನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಲ್ಲಿಯೂ ಆ ಅಳತೆಗಳೇ ಕಂಡುಬಂದವು;


ಅವನು ನನ್ನನ್ನು ಒಳಗಣ ಪ್ರಾಕಾರದ ಪೂರ್ವಕ್ಕೆ ಕರೆದುತಂದು ಅಲ್ಲಿನ ಹೆಬ್ಬಾಗಿಲನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಆ ಅಳತೆಗಳೇ ಕಂಡುಬಂದವು.


ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗಳಿಗೂ ನಡುವಣ ಕೋಣೆಗಳಿಗೆ ಕರೆದುತಂದು


“ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ದಕ್ಷಿಣ ಕಡೆಯಲ್ಲಿ ತೆರೆಗಳು ಇರಬೇಕು. ಹುರಿನಾರಿನ ಬಟ್ಟೆಯಿಂದ ತಯಾರಿಸಿದ ಆ ತೆರೆಗಳು ನೂರು ಮೊಳ ಉದ್ದವಿರಬೇಕು.


ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು