Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:38 - ಕನ್ನಡ ಸತ್ಯವೇದವು C.L. Bible (BSI)

38 ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೊಠಡಿಯೂ ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ದಹನ ಬಲಿಪ್ರಾಣಿಗಳ ಮಾಂಸವನ್ನು ತೊಳೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ ಅದರ ದ್ವಾರವೂ ಕಾಣಿಸಿದವು; ಆ ಕೋಣೆಯೊಳಗೆ ಸರ್ವಾಂಗಹೋಮಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:38
18 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.


ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ಎರಡು ಪಕ್ಕಗಳಲ್ಲಿನ ಗೋಡೇಕೋಣೆಗಳ ಮುಂದೆ ಒಂದೊಂದು ಐವತ್ತು ಸೆಂಟಿಮೀಟರ್ ಅವಕಾಶ; ಎರಡು ಕಡೆಯ ಗೋಡೇಕೋಣೆಗಳ ಅಗಲವು ಮೂರು ಮೀಟರ್.


ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.


ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.


ಆ ಕೊಠಡಿಯಿಂದ ಹೊರಗೆ ಹಾಕಿಸಿ ಕೊಠಡಿಯನ್ನು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಅಲ್ಲಿಡಿಸಿದೆ.


ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.


ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.


ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು.


ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು