Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:39 - ಕನ್ನಡ ಸತ್ಯವೇದವು C.L. Bible (BSI)

39 ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:39
22 ತಿಳಿವುಗಳ ಹೋಲಿಕೆ  

ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.


“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ವೇದಿಕೆಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.


ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.


ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು.


ಇದಲ್ಲದೆ ದಹನಬಲಿಗೆ ಉಪಯುಕ್ತವಾದ, ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು; ಅವುಗಳ ಉದ್ದ ಎಪ್ಪತ್ತೈದು ಸೆಂಟಿಮೀಟರ್, ಎತ್ತರ ಐವತ್ತು ಸೆಂಟಿಮೀಟರ್, ಅವುಗಳ ಮೇಲೆ ದಹನಬಲಿಪಶುಗಳ ವಧೆಯ ಉಪಕರಣಗಳನ್ನು ಇಡುತ್ತಿದ್ದರು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಅವರು ಪರಿಹಾರಕ್ಕಾಗಿ, ತಮ್ಮ ಹಿಂಡಿನಿಂದ ಕಳಂಕರಹಿತವಾದ ಒಂದು ಟಗರನ್ನು ಅಥವಾ ಅದಕ್ಕೆ ಸರಿಸಮಾನವಾದುದ್ದನ್ನು ತಂದು ಯಾಜಕನಿಗೆ ಒಪ್ಪಿಸಬೇಕು.


ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಪೀಠಗಳು ಇದ್ದವು.


ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು, ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಬಲಿಪ್ರಾಣಿಗಳನ್ನು ವಧಿಸುವ ಎಂಟು ಪೀಠಗಳಿದ್ದವು.


“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಅವರು ಅಪರಾಧಿಗಳಾದುದರಿಂದ ಸರ್ವೇಶ್ವರನ ಸನ್ನಿಧಿಯಲ್ಲಿ ಈ ಪರಿಹಾರ ಬಲಿಯನ್ನು ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು