Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:44 - ಕನ್ನಡ ಸತ್ಯವೇದವು C.L. Bible (BSI)

44 ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಮೇಲೆ ಅವನು ನನ್ನನ್ನು ಒಳಗಣ ಪ್ರಾಕಾರಕ್ಕೆ ಕರತಂದನು; ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು; ಬಡಗಣ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ತೆಂಕಲಿಗೆ ಅಭಿಮುಖವಾಗಿತ್ತು; ತೆಂಕಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆಯು ಬಡಗಲಿಗೆ ಅಭಿಮುಖವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅನಂತರ ಅವನು ನನ್ನನ್ನು ಒಳಗಿನ ಪ್ರಾಕಾರಕ್ಕೆ ಕರೆತಂದರು. ಅಲ್ಲಿ ಎರಡು ಕೊಠಡಿಗಳು ಇದ್ದವು. ಒಂದು ಉತ್ತರದ ಬಾಗಿಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಿಲಿನ ಕಡೆಗೆ ಉತ್ತರಕ್ಕೆ ಅಭಿಮುಖವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:44
13 ತಿಳಿವುಗಳ ಹೋಲಿಕೆ  

ಒಳಗಿನ ಪ್ರಾಕಾರದಲ್ಲೂ ದಕ್ಷಿಣಕ್ಕೆ ಹೆಬ್ಬಾಗಿಲಿತ್ತು. ದಕ್ಷಿಣದಲ್ಲಿ ಒಂದು ಬಾಗಿಲಿನಿಂದ ಎದುರುಬಾಗಿಲಿಗೆ ಅಳೆದಾಗ ಐವತ್ತು ಮೀಟರ್ ಇತ್ತು.


ಹೊರಗಣ ಪ್ರಾಕಾರದ ಬಡಗಣ ಮೂಡಣ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಪ್ರಾಕಾರಕ್ಕೂ ಹೆಬ್ಬಾಗಿಲುಗಳು ಇದ್ದವು. ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ಐವತ್ತು ಮೀಟರ್ ಅಳೆದನು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೊಠಡಿಯೂ ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ದಹನ ಬಲಿಪ್ರಾಣಿಗಳ ಮಾಂಸವನ್ನು ತೊಳೆಯುತ್ತಿದ್ದರು.


ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲ ಕಡೆಯಿದ್ದವು. ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.


ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.


ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವು ಕಂಬಗಳೂ ಒಂದೇ ಅಳತೆಯಾಗಿದ್ದವು.


ಅಲ್ಲಿ ಒಂದೊಂದು ಕೋಣೆಯ ಉದ್ದ ಮೂರು ಮೀಟರ್, ಅಗಲ ಮೂರು ಮೀಟರ್.


ಅಂಚಿನಲ್ಲಿ ಎಪ್ಪತ್ತೈದು ಮಿಲಿಮೀಟರ್ ದಿಂಡು ಕಟ್ಟಿತ್ತು; ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು