Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:5 - ಕನ್ನಡ ಸತ್ಯವೇದವು C.L. Bible (BSI)

5 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಮೂರು ಮೀಟರ್ ಅಳತೆಕೋಲೊಂದಿತ್ತು. ಆ ಗೋಡೆ ಮೂರು ಮೀಟರ್ ದಪ್ಪ ಹಾಗು ಮೂರು ಮೀಟರ್ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು; ಆ ಪುರುಷನ ಕೈಯಲ್ಲಿ ಆರು ಉದ್ದಮೊಳದ ಅಳತೇಕೋಲೊಂದಿತ್ತು (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿಯುದ್ದ); ಅವನು ಆ ಗೋಡೆಯ ದಪ್ಪವನ್ನು ಒಂದು ಕೋಲು, ಎತ್ತರವನ್ನು ಒಂದು ಕೋಲು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಲಯದ ಹೊರಗಿನಿಂದ ಸುತ್ತಲೂ ಗೋಡೆ ಇರುವದನ್ನು ನಾನು ಕಂಡೆನು. ಅವನ ಕೈಯಲ್ಲಿ ಅಳತೆಯ ಕೋಲಿತ್ತು. ಅದು ಉದ್ದ ಅಳತೆಯಲ್ಲಿ ಆರು ಮೊಳ ಉದ್ದವಾಗಿತ್ತು. ಅವನು ಗೋಡೆಯ ಅಗಲವನ್ನು ಅಳತೆ ಮಾಡಿದಾಗ, ಅದು ಒಂದು ಕೋಲು ಅಗಲವಾಗಿತ್ತು. ಅವನು ಗೋಡೆಯ ಎತ್ತರವನ್ನು ಅಳತೆ ಮಾಡಿದಾಗ ಅದು ಒಂದು ಕೋಲು ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ದೇವಾಲಯದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿರುವ ಒಂದು ಗೋಡೆಯನ್ನು ಕಂಡೆನು. ಆ ಮನುಷ್ಯನ ಕೈಯಲ್ಲಿದ್ದ ಅಳತೆ ಕೋಲು ಸುಮಾರು ಮೂರು ಮೀಟರ್ ಉದ್ದವಿತ್ತು, ಪ್ರತಿಯೊಂದೂ ಒಂದು ಮೀಟರ್ ಮತ್ತು ಒಂದು ಅಂಗೈ ಅಗಲವಾಗಿತ್ತು. ಆ ಮನುಷ್ಯನು ಗೋಡೆಯನ್ನು ಅಳೆದನು. ಅದು ಒಂದು ಕೋಲು ಅಗಲ ಮತ್ತು ಒಂದು ಕೋಲು ಎತ್ತರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:5
10 ತಿಳಿವುಗಳ ಹೋಲಿಕೆ  

ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಪರ್ವತಗಳಿರುವಂತೆ ಜೆರುಸಲೇಮಿನ ಸುತ್ತಮುತ್ತಲು I ಇಹನು ಪ್ರಭು ಇಂದಿಗೂ ಎಂದಿಗೂ ತನ್ನ ಜನರ ಸುತ್ತಲು II


(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ದೇವಸ್ಥಾನದ ಸುತ್ತಮುತ್ತಲು ಒಂದು ಜಗಲಿ ಕಾಣಿಸಿತು. ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಮೂರು ಮೀಟರ್ ಅಳತೇ ಕೋಲಿನಷ್ಟು ಎತ್ತರವಾಗಿತ್ತು.


ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಇದೇ ಬಲಿವೇದಿಕೆಯ ಪೀಠ.


ಆ ಪುರುಷನು ಒಳಗಿನ ಮಂದಿರವನ್ನು ಅಳೆದ ನಂತರ ನನ್ನನ್ನು ಪೂರ್ವಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರೆದುತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು